Monday, July 4, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 160 ಮಂದಿಗೆ ಕೊರೋನಾ ಸೋಂಕು ದೃಢ

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಶುಕ್ರವಾರ 160 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 148 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 219 ಮಂದಿ ಗುಣಮುಖರಾದರು. ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಮೂವರು ಸಾವಿಗೀಡಾದರು.
ಕೇರಳದಲ್ಲಿ 10,944 ಹೊಸ ಪ್ರಕರಣ
ಕೇರಳದಲ್ಲಿ ಶುಕ್ರವಾರ ಹೊಸದಾಗಿ 10,944 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 10,397 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 12,922 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 120 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ಕೇರಳದಲ್ಲಿ ಗುರುವಾರ ಶೇಕಡಾ 12.37 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss