Wednesday, July 6, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 34 ಮಂದಿಗೆ ಕೊರೋನಾ ಸೋಂಕು ದೃಢ

 ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಶುಕ್ರವಾರ 34 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 26 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 30 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಇಬ್ಬರು ಸಾವಿಗೀಡಾದರು.

ಕೇರಳದಲ್ಲಿ 2676 ಹೊಸ ಪ್ರಕರಣ

ಕೇರಳದಲ್ಲಿ ಶುಕ್ರವಾರ ಹೊಸದಾಗಿ 2676 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 2453 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 2742 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 11 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಗುರುವಾರ ಶೇಕಡಾ 4.14 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss