Friday, July 1, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ ಬರೋಬ್ಬರಿ 813 ಮಂದಿಗೆ ಕೊರೋನಾ ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………..

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಶುಕ್ರವಾರ ಬರೋಬ್ಬರಿ 813 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 771 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 713 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ 37,199 ಜನರಿಗೆ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 34,587 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ರಾಜ್ಯದಲ್ಲಿ 17,500 ಜನರು ಗುಣಮುಖರಾದರು.
ಕಲ್ಲಿಕೋಟೆ ಜಿಲ್ಲೆಯಲ್ಲಿ 4915, ಎರ್ನಾಕುಳಂ 4642, ತೃಶೂರು 4281, ಮಲಪ್ಪುರಂ 3945, ತಿರುವನಂತಪುರ 3535, ಕೋಟ್ಟಾಯಂ 2917, ಕಣ್ಣೂರು 2482, ಪಾಲಕ್ಕಾಡು 2273, ಆಲಪ್ಪುಳ 2224, ಕೊಲ್ಲಂ 1969, ಇಡುಕ್ಕಿ 1235, ಪತ್ತನಂತ್ತಿಟ್ಟ 1225, ಕಾಸರಗೋಡು 813, ವಯನಾಡು ಜಿಲ್ಲೆಯಲ್ಲಿ 743 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಈ ಮಧ್ಯೆ ಕೋವಿಡ್ ಸೋಂಕು ಬಾಧಿಸಿ ಕೇರಳದಲ್ಲಿ ಶುಕ್ರವಾರ 49 ಮಂದಿ ಮೃತಪಟ್ಟರು. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಒಟ್ಟು 5308 ಜನರು ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss