Wednesday, July 6, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 939 ಮಂದಿಗೆ ಕೋವಿಡ್ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಶುಕ್ರವಾರ 939 ಮಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಪೈಕಿ 908 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 704 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 38,460 ಜನರಿಗೆ ಕೋವಿಡ್ ವೈರಸ್ ದೃಢಗೊಂಡಿದೆ. ಇದರಲ್ಲಿ 35,402 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ರಾಜ್ಯದಲ್ಲಿ 26,662 ಜನರು ಗುಣಮುಖರಾದರು.
ಕೇರಳದ ಜಿಲ್ಲೆಗಳ ಪೈಕಿ ಎರ್ನಾಕುಳಂ ಜಿಲ್ಲೆಯಲ್ಲಿ 5361, ಕಲ್ಲಿಕೋಟೆ 4200, ತಿರುವನಂತಪುರ 3950, ಮಲಪ್ಪುರಂ 3949, ತೃಶೂರು 3738, ಕಣ್ಣೂರು 3139, ಪಾಲಕ್ಕಾಡು 2968, ಕೊಲ್ಲಂ 2422, ಆಲಪ್ಪುಳ 2160, ಕೋಟ್ಟಾಯಂ 2153, ಪತ್ತನಂತ್ತಿಟ್ಟ 1191, ವಯನಾಡು 1173, ಇಡುಕ್ಕಿ 1117, ಕಾಸರಗೋಡು ಜಿಲ್ಲೆಯಲ್ಲಿ 939 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮಧ್ಯೆ ಕೇರಳದಲ್ಲಿ ಕೋವಿಡ್ ವೈರಸ್ ಬಾಧಿಸಿ ಶುಕ್ರವಾರ 54 ಮಂದಿ ಮೃತಪಟ್ಟರು. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಒಟ್ಟು 5682 ಜನರು ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss