ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 2850 ಮಂದಿ ಗುಣಮುಖ, 739 ಜನರಿಗೆ ಕೋವಿಡ್ ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಮಂಗಳವಾರ 739 ಮಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಪೈಕಿ 714 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ ಬರೋಬ್ಬರಿ 2850 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 31,337 ಜನರಿಗೆ ಕೋವಿಡ್ ವೈರಸ್ ದೃಢಗೊಂಡಿದೆ. ಇದರಲ್ಲಿ 28,921 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ರಾಜ್ಯದಲ್ಲಿ 45,926 ಜನರು ಗುಣಮುಖರಾದರು.
ಕೇರಳದ ಜಿಲ್ಲೆಗಳ ಪೈಕಿ ಮಲಪ್ಪುರಂ ಜಿಲ್ಲೆಯಲ್ಲಿ 4320, ಎರ್ನಾಕುಳಂ 3517, ತಿರುವನಂತಪುರ 3355, ಕೊಲ್ಲಂ 3323, ಪಾಲಕ್ಕಾಡು 3105, ಕಲ್ಲಿಕೋಟೆ 2474, ಆಲಪ್ಪುಳ 2353, ತೃಶೂರು 2312, ಕೋಟ್ಟಾಯಂ 1855, ಕಣ್ಣೂರು 1374, ಪತ್ತನಂತ್ತಿಟ್ಟ 1149, ಇಡುಕ್ಕಿ 830, ಕಾಸರಗೋಡು 739, ವಯನಾಡು ಜಿಲ್ಲೆಯಲ್ಲಿ 631 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಈ ಮಧ್ಯೆ ಕೇರಳದಲ್ಲಿ ಕೋವಿಡ್ ಸೋಂಕು ಬಾಧಿಸಿ ಮಂಗಳವಾರ 97 ಮಂದಿ ಅಸುನೀಗಿದರು. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಒಟ್ಟು 6612 ಜನರು ಮೃತಪಟ್ಟರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss