Sunday, August 14, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 388 ಜನರಿಗೆ ಕೋವಿಡ್ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಮಂಗಳವಾರ 388 ಮಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಪೈಕಿ 378 ಜನರಿಗೆ ಸಂಪರ್ಕದ ಮೂಲಕ ವೈರಸ್ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 516 ಮಂದಿ ಸೋಂಕುಮುಕ್ತರಾದರು. ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ನಿಂದ ಯಾವುದೇ ಸಾವು ಸಂಭವಿಸಿಲ್ಲ. ಅದರಂತೆ ಇದುವರೆಗಿನ ಒಟ್ಟು ಸಾವಿನ ಸಂಖ್ಯೆ 478 ಆಗಿದೆ. ಕೇರಳದಲ್ಲಿ ಹೊಸದಾಗಿ 25,772 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಇದರಲ್ಲಿ 24,253 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ರಾಜ್ಯದಲ್ಲಿ 27,320 ಜನರು ಗುಣಮುಖರಾದರು.
ಕೇರಳದ ಜಿಲ್ಲೆಗಳ ಪೈಕಿ ಎರ್ನಾಕುಳಂ ಜಿಲ್ಲೆಯಲ್ಲಿ 3194, ಮಲಪ್ಪುರಂ 2952, ಕಲ್ಲಿಕೋಟೆ 2669, ತೃಶೂರು 2557, ಕೊಲ್ಲಂ 2548, ಪಾಲಕ್ಕಾಡು 2332, ಕೋಟ್ಟಾಯಂ 1814, ತಿರುವನಂತಪುರ 1686, ಕಣ್ಣೂರು 1649, ಆಲಪ್ಪುಳ 1435, ಪತ್ತನಂತ್ತಿಟ್ಟ 1016, ಇಡುಕ್ಕಿ 925, ವಯನಾಡು 607, ಕಾಸರಗೋಡು ಜಿಲ್ಲೆಯಲ್ಲಿ 388 ಜನರಿಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಮಧ್ಯೆ ಕೋವಿಡ್ ವೈರಸ್ ಬಾಧಿಸಿ ಕೇರಳದಲ್ಲಿ ಮಂಗಳವಾರ 186 ಮಂದಿ ಅಸುನೀಗಿದರು. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಒಟ್ಟು 21,820 ಜನರು ಮರಣ ಹೊಂದಿದರು. ಕೇರಳದಲ್ಲಿ ಮಂಗಳವಾರ ಶೇಕಡಾ 15.87 ರಷ್ಟು ಕೊರೋನಾ ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದ್ದು , ಸದ್ಯಕ್ಕೆ ರಾಜ್ಯದಲ್ಲಿ ಸೋಂಕು ಇಳಿಮುಖವಾಗುತ್ತಿರುವುದು ಕಂಡುಬರುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss