ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 606 ಮಂದಿಗೆ ಕೊರೋನಾ ದೃಢ

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಕೊರೋನಾ ಸೋಂಕು ತಗುಲಿದವರ ಸಂಖ್ಯೆ ಮಂಗಳವಾರ 600ರ ಗಡಿ ದಾಟಿದೆ. ಅದರಂತೆ 606 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 584 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 235 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಿಲ್ಲ.

ಕೇರಳದಲ್ಲಿ 28,481 ಹೊಸ ಪ್ರಕರಣ

ಕೇರಳದ ಎಲ್ಲಾ ಜಿಲ್ಲೆಗಳಲ್ಲೂ ಸೋಂಕು ಹರಡುತ್ತಿದ್ದು , ಮಂಗಳವಾರ ಹೊಸದಾಗಿ 28,481 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 27,522 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 7303 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 39 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮಂಗಳವಾರ ಶೇಕಡಾ 35.27 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!