Wednesday, August 17, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 119 ಮಂದಿಗೆ ಕೊರೋನಾ ಸೋಂಕು ದೃಢ

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಶನಿವಾರ 119 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 108 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 186 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಒಬ್ಬರು ಸಾವಿಗೀಡಾದರು.

ಕೇರಳದಲ್ಲಿ 7427 ಹೊಸ ಪ್ರಕರಣ
ಕೇರಳದಲ್ಲಿ ಶನಿವಾರ ಹೊಸದಾಗಿ 7427 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 7069 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 7166 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 62 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶುಕ್ರವಾರ ಶೇಕಡಾ 10.77 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!