spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 715 ಜನರಿಗೆ ಕೋವಿಡ್ ಸೋಂಕು ದೃಢ, 801 ಗುಣಮುಖ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಶನಿವಾರ 715 ಮಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಪೈಕಿ 693 ಜನರಿಗೆ ಸಂಪರ್ಕದ ಮೂಲಕ ವೈರಸ್ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 801 ಮಂದಿ ಸೋಂಕುಮುಕ್ತರಾದರು. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 20,624 ಜನರಿಗೆ ಕೋವಿಡ್ ವೈರಸ್ ದೃಢಗೊಂಡಿದೆ. ಇದರಲ್ಲಿ 19,487 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ರಾಜ್ಯದಲ್ಲಿ 16,865 ಜನರು ಗುಣಮುಖರಾದರು.
ಕೇರಳದ ಜಿಲ್ಲೆಗಳ ಪೈಕಿ ಮಲಪ್ಪುರಂ ಜಿಲ್ಲೆಯಲ್ಲಿ 3474, ತೃಶೂರು 2693, ಪಾಲಕ್ಕಾಡು 2209, ಕಲ್ಲಿಕೋಟೆ 2113, ಎರ್ನಾಕುಳಂ 2072, ಕೊಲ್ಲಂ 1371, ಕಣ್ಣೂರು 1243, ಆಲಪ್ಪುಳ 1120, ಕೋಟ್ಟಾಯಂ 1111, ತಿರುವನಂತಪುರ 969, ಕಾಸರಗೋಡು 715, ಪತ್ತನಂತ್ತಿಟ್ಟ 629, ವಯನಾಡು 530, ಇಡುಕ್ಕಿ ಜಿಲ್ಲೆಯಲ್ಲಿ 375 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಈ ಮಧ್ಯೆ ಕೇರಳದಲ್ಲಿ ಶನಿವಾರ ಕೋವಿಡ್ ಸೋಂಕು ಬಾಧಿಸಿ 80 ಮಂದಿ ಮೃತಪಟ್ಟರು. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಒಟ್ಟು 16,781 ಜನರು ಸಾವಿಗೀಡಾದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss