Monday, August 15, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 847 ಮಂದಿಗೆ ಕೋವಿಡ್ ಸೋಂಕು, 224 ಗುಣಮುಖ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ, ಕಾಸರಗೋಡು:

ಜಿಲ್ಲೆಯಲ್ಲಿ ಶನಿವಾರ 847 ಮಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಪೈಕಿ 827 ಜನರಿಗೆ ಸಂಪರ್ಕದ ಮೂಲಕ ವೈರಸ್ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 224 ಮಂದಿ ಸೋಂಕು ಮುಕ್ತರಾದರು. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 32,680 ಜನರಿಗೆ ಕೋವಿಡ್ ವೈರಸ್ ದೃಢಗೊಂಡಿದೆ. ಇದರಲ್ಲಿ 29,969 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ರಾಜ್ಯದಲ್ಲಿ 29,442 ಜನರು ಗುಣಮುಖರಾದರು.
ಕೇರಳದ ಜಿಲ್ಲೆಗಳ ಪೈಕಿ ಮಲಪ್ಪುರಂ ಜಿಲ್ಲೆಯಲ್ಲಿ 4782, ಎರ್ನಾಕುಳಂ 3744, ತೃಶೂರು 3334, ತಿರುವನಂತಪುರ 3292, ಪಾಲಕ್ಕಾಡು 3165, ಕಲ್ಲಿಕೋಟೆ 2960, ಕೊಲ್ಲಂ 2332, ಕೋಟ್ಟಾಯಂ 2012, ಆಲಪ್ಪುಳ 1996, ಕಣ್ಣೂರು 1652, ಪತ್ತನಂತ್ತಿಟ್ಟ 1119, ಕಾಸರಗೋಡು 847, ಇಡುಕ್ಕಿ 737, ವಯನಾಡು ಜಿಲ್ಲೆಯಲ್ಲಿ 702 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಈ ಮಧ್ಯೆ ಕೋವಿಡ್ ಸೋಂಕು ಬಾಧಿಸಿ ಶನಿವಾರ ಕೇರಳದಲ್ಲಿ 96 ಮಂದಿ ಮೃತಪಟ್ಟರು. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಒಟ್ಟು 6339 ಜನರು ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss