ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 13 ಮಂದಿಗೆ ಕೊರೋನಾ ವೈರಸ್ ದೃಢ

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಶನಿವಾರ 13 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 10 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 47 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಲಿಲ್ಲ.

ಕೇರಳದಲ್ಲಿ 1836 ಹೊಸ ಪ್ರಕರಣ

ಕೇರಳದಲ್ಲಿ ಶನಿವಾರ ಹೊಸದಾಗಿ 1836 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 1736 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 2988 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 4 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶನಿವಾರ ಶೇಕಡಾ 06.01 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!