Sunday, August 14, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 165 ಮಂದಿಗೆ ಕೊರೋನಾ ಸೋಂಕು ದೃಢ

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಗುರುವಾರ 165 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 154 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 199 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.

ಕೇರಳದಲ್ಲಿ 8733 ಹೊಸ ಪ್ರಕರಣ

ಕೇರಳದಲ್ಲಿ ಗುರುವಾರ ಹೊಸದಾಗಿ 8733 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 8308 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 9855 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 118 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಬುಧವಾರ ಶೇಕಡಾ 11.84 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss