Tuesday, June 28, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 182 ಮಂದಿಗೆ ಕೊರೋನಾ ಸೋಂಕು ದೃಢ

ಹೊಸ ದಿಗಂತ ವರದಿ , ಕಾಸರಗೋಡು:

ಜಿಲ್ಲೆಯಲ್ಲಿ ಗುರುವಾರ 182 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 170 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 236 ಮಂದಿ ಗುಣಮುಖರಾದರು. ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಇಬ್ಬರು ಸಾವಿಗೀಡಾದರು.

ಕೇರಳದಲ್ಲಿ 12,288 ಹೊಸ ಪ್ರಕರಣ
ಕೇರಳದಲ್ಲಿ ಗುರುವಾರ ಹೊಸದಾಗಿ 12,288 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 11,674 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 15,808 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 141 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ಕೇರಳದಲ್ಲಿ ಬುಧವಾರ ಶೇಕಡಾ 12.77 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss