Wednesday, July 6, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 613 ಮಂದಿಗೆ ಕೊರೋನಾ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………

ಹೊಸ ದಿಗಂತ ವರದಿ, ಕಾಸರಗೋಡು:

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 613 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 592 ಜನರಿಗೆ ಸಂಪರ್ಕದ ಮೂಲಕ ವೈರಸ್ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 325 ಮಂದಿ ಸೋಂಕುಮುಕ್ತರಾದರು. ಜಿಲ್ಲೆಯಲ್ಲಿ ಗುರುವಾರ ಕೋವಿಡ್ ನಿಂದ ಸಾವು ಸಂಭವಿಸಿಲ್ಲ. ಕೊರೋನಾದಿಂದ ಜಿಲ್ಲೆಯ ಇದುವರೆಗಿನ ಒಟ್ಟು ಸಾವು 432 ಆಗಿದೆ. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 30,007 ಜನರಿಗೆ ಕೋವಿಡ್ ವೈರಸ್ ದೃಢಗೊಂಡಿದೆ. ಇದರಲ್ಲಿ 28,650 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ರಾಜ್ಯದಲ್ಲಿ 18,997 ಜನರು ಗುಣಮುಖರಾದರು.
ಕೇರಳ ರಾಜ್ಯದ ಜಿಲ್ಲೆಗಳ ಪೈಕಿ ಎರ್ನಾಕುಳಂ ಜಿಲ್ಲೆಯಲ್ಲಿ 3872, ಕಲ್ಲಿಕೋಟೆ 3461, ತೃಶೂರು 3157, ಮಲಪ್ಪುರಂ 2985, ಕೊಲ್ಲಂ 2619, ಪಾಲಕ್ಕಾಡು 2261, ತಿರುವನಂತಪುರ 1996, ಕೋಟ್ಟಾಯಂ 1992, ಕಣ್ಣೂರು 1939, ಆಲಪ್ಪುಳ 1741, ಪತ್ತನಂತ್ತಿಟ್ಟ 1380, ವಯನಾಡು 1161, ಇಡುಕ್ಕಿ 900, ಕಾಸರಗೋಡು ಜಿಲ್ಲೆಯಲ್ಲಿ 613 ಜನರಿಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಮಧ್ಯೆ ಕೋವಿಡ್ ವೈರಸ್ ಬಾಧಿಸಿ ಕೇರಳದಲ್ಲಿ ಗುರುವಾರ 162 ಮಂದಿ ಅಸುನೀಗಿದರು. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಒಟ್ಟು 20,134 ಜನರು ಮರಣ ಹೊಂದಿದರು. ಕೇರಳದಲ್ಲಿ ಗುರುವಾರ ಶೇಕಡಾ 18.03ರಷ್ಟು ಕೋವಿಡ್ ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss