Tuesday, July 5, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 1843 ಮಂದಿ ಗುಣಮುಖ: 454 ಜನರಿಗೆ ಪಾಸಿಟಿವ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಮಂಗಳವಾರ 454 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 445 ಜನರಿಗೆ ಸಂಪರ್ಕದ ಮೂಲಕ ವೈರಸ್ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 1843 ಮಂದಿ ಸೋಂಕುಮುಕ್ತರಾದರು. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 15,567 ಜನರಿಗೆ ಕೊರೋನಾ ವೈರಸ್ ದೃಢಪಡಿಸಲಾಗಿದೆ. ಇದರಲ್ಲಿ 14,695 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ರಾಜ್ಯದಲ್ಲಿ 20,019 ಜನರು ಗುಣಮುಖರಾದರು.
ಕೇರಳ ರಾಜ್ಯದ ಜಿಲ್ಲೆಗಳ ಪೈಕಿ ಮಲಪ್ಪುರಂ ಜಿಲ್ಲೆಯಲ್ಲಿ 2121, ಎರ್ನಾಕುಳಂ 1868, ತಿರುವನಂತಪುರ 1760, ಕೊಲ್ಲಂ 1718, ಪಾಲಕ್ಕಾಡು 1284, ಕಲ್ಲಿಕೋಟೆ 1234, ತೃಶೂರು 1213, ಆಲಪ್ಪುಳ 1197, ಕಣ್ಣೂರು 692, ಕೋಟ್ಟಾಯಂ 644, ಪತ್ತನಂತ್ತಿಟ್ಟ 560, ಇಡುಕ್ಕಿ 550, ಕಾಸರಗೋಡು 454, ವಯನಾಡು ಜಿಲ್ಲೆಯಲ್ಲಿ 272 ಜನರಿಗೆ ಕೋವಿಡ್ ವೈರಸ್ ದೃಢಗೊಂಡಿದೆ. ಈ ಮಧ್ಯೆ ಕೇರಳದಲ್ಲಿ ಮಂಗಳವಾರ ಕೊರೋನಾ ಸೋಂಕು ಬಾಧಿಸಿ 124 ಮಂದಿ ಅಸುನೀಗಿದರು. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಒಟ್ಟು 10,281 ಜನರು ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss