ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 668 ಮಂದಿಗೆ ಕೊರೋನಾ ವೈರಸ್ ದೃಢ

 ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಬುಧವಾರ 668 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 603 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 675 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಇಬ್ಬರು ಸಾವಿಗೀಡಾದರು.

ಕೇರಳದಲ್ಲಿ 34,199 ಹೊಸ ಪ್ರಕರಣ

ಕೇರಳದ ಎಲ್ಲಾ ಜಿಲ್ಲೆಗಳಲ್ಲೂ ಇನ್ನಷ್ಟು ಸೋಂಕು ವ್ಯಾಪಿಸುತ್ತಿದ್ದು , ಬುಧವಾರ ಹೊಸದಾಗಿ 34,199 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 33,195 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 8193 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 49 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಬುಧವಾರ ಶೇಕಡಾ 37.17 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!