ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………
ಹೊಸ ದಿಗಂತ ವರದಿ, ಕಾಸರಗೋಡು:
ಜಿಲ್ಲೆಯಲ್ಲಿ ಬುಧವಾರ 786 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಪೈಕಿ 766 ಜನರಿಗೆ ಸಂಪರ್ಕದ ಮೂಲಕ ವೈರಸ್ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 513 ಮಂದಿ ಸೋಂಕುಮುಕ್ತರಾದರು. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 15,600 ಜನರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಇದರಲ್ಲಿ 14,761 ಮಂದಿಗೆ ಸಂಪರ್ಕದಿಂದ ವೈರಸ್ ತಗಲಿದೆ. ರಾಜ್ಯದಲ್ಲಿ 11,629 ಜನರು ಗುಣಮುಖರಾದರು.
ಕೇರಳದ ಜಿಲ್ಲೆಗಳ ಪೈಕಿ ಮಲಪ್ಪುರಂ ಜಿಲ್ಲೆಯಲ್ಲಿ 2052, ಎರ್ನಾಕುಳಂ 1727, ತೃಶೂರು 1724, ಕಲ್ಲಿಕೋಟೆ 1683, ಕೊಲ್ಲಂ 1501, ಪಾಲಕ್ಕಾಡು 1180, ತಿರುವನಂತಪುರ 1150, ಕಣ್ಣೂರು 962, ಆಲಪ್ಪುಳ 863, ಕಾಸರಗೋಡು 786, ಕೋಟ್ಟಾಯಂ 779, ವಯನಾಡು 453, ಪತ್ತನಂತ್ತಿಟ್ಟ 449, ಇಡುಕ್ಕಿ ಜಿಲ್ಲೆಯಲ್ಲಿ 291 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮಧ್ಯೆ ಕೇರಳದಲ್ಲಿ ಕೋವಿಡ್ ವೈರಸ್ ಬಾಧಿಸಿ ಬುಧವಾರ 148 ಮಂದಿ ಸಾವಿಗೀಡಾದರು. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಒಟ್ಟು 14,108 ಜನರು ಮರಣ ಹೊಂದಿದರು.