ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 875 ಮಂದಿಗೆ ಕೊರೋನಾ ದೃಢ

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಬುಧವಾರ 875 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 780 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 937 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಿಲ್ಲ.

ಕೇರಳದಲ್ಲಿ 52,199 ಹೊಸ ಪ್ರಕರಣ

ಕೇರಳದಲ್ಲಿ ಬುಧವಾರ ಹೊಸದಾಗಿ 52,199 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 44,956 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 41,715 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 29 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಬುಧವಾರ ಶೇಕಡಾ 41.88 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!