Tuesday, June 28, 2022

Latest Posts

ಕಾಸರಗೋಡು| ಭಾರೀ ಮಳೆಯ ಮುನ್ಸೂಚನೆ: ತುರ್ತು ಸಂದರ್ಭದಲ್ಲಿ 112ಕ್ಕೆ ಕರೆ ಮಾಡಿ

ಹೊಸದಿಗಂತ ವರದಿ, ಕಾಸರಗೋಡು:

ಕಾಸರಗೋಡು ಜಿಲ್ಲೆಗೆ ಶನಿವಾರ ರಾತ್ರಿಯ ವೇಳೆಗೆ ಮೇಘಗಳ ರಾಶಿಯೇ ಆವರಿಸಿದ್ದು , ಭಾನುವಾರ ರಾತ್ರಿಯೂ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಅರಬ್ಬೀ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿಯೂ ಧಾರಾಕಾರ ಮಳೆಯಾಗುತ್ತಿದೆ. ಈ ನಿಟ್ಟಿನಲ್ಲಿ ಜಾಗರೂಕತೆ ಪಾಲಿಸಲು ತಿಳಿಸಲಾಗಿದೆ.
ಈ ಮಧ್ಯೆ ಭಾರೀ ಮಳೆಯ ಸಂದರ್ಭದಲ್ಲಿ ಎಲ್ಲ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಎಚ್ಚರಿಕೆಯಿಂದ ಇರುವಂತೆ ಕೇರಳ ರಾಜ್ಯ ಪೊಲೀಸ್ ಮುಖ್ಯಸ್ಥ ಅನಿಲ್ ಕಾಂತ್ ಹೇಳಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ ವಿಶೇಷ ನಿಯಂತ್ರಣ ಕೊಠಡಿಗಳನ್ನು ತೆರೆಯಲು ಪೊಲೀಸರು ಜಿಲ್ಲಾಧಿಕಾರಿಗಳು ಮತ್ತು ದುರಂತ ನಿರ್ವಹಣಾ ಪ್ರಾಧಿಕಾರದೊಂದಿಗೆ ಸಂಪೂರ್ಣ ಸಹಕರಿಸಲಿದ್ದಾರೆ ಎಂದು ಡಿಜಿಪಿ ತಿಳಿಸಿದರು.
ರಕ್ಷಣಾ ಕಾರ್ಯಾಚರಣೆಗಾಗಿ ಪೊಲೀಸ್ ಠಾಣೆಗಳಲ್ಲಿ ವಿಶೇಷ ತಂಡಗಳನ್ನು ರಚಿಸಲಾಗುವುದು. ಅಲ್ಲದೆ ರಕ್ಷಣಾ ಕಾರ್ಯಾಚರಣೆಗೆ ಇಡೀ ಪೊಲೀಸ್ ಪಡೆಯನ್ನು ಸಜ್ಜುಗೊಳಿಸಬೇಕು ಎಂದು ಡಿಜಿಪಿ ಸೂಚಿಸಿದರು. ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ಯಾವುದೇ ಸಮಯದಲ್ಲಿ 112 ಸಂಖ್ಯೆಗೆ ಕರೆ ಮಾಡಬಹುದು.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಮಳೆಯಾಗುತ್ತಿದೆ. ಕಾಸರಗೋಡು, ಕಣ್ಣೂರು, ವಯನಾಡು, ಕಲ್ಲಿಕೋಟೆ ಮೊದಲಾದ ಮಲಬಾರ್ ಜಿಲ್ಲೆಗಳಲ್ಲಿ ವರ್ಷಧಾರೆಯಾಗುತ್ತಿದೆ. ಅದರಂತೆ ಕಾಸರಗೋಡು ಜಿಲ್ಲೆಯಲ್ಲಿ ಗರಿಷ್ಠ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss