ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಯ ಉಗ್ರನೊಬ್ಬನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ನ ಮಿರ್ಹಾಮಾ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಶನಿವಾರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದು, ಈ ವೇಳೆ,ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ ಎನ್ಕೌಂಟರ್ಗೆ ನಡೆಸಲಾಗಿದೆ. ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರಗಾಮಿ ಕೊಲ್ಲಲ್ಪಟ್ಟ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಶ್ಮೀರದ ಐಜಿಪಿ ವಿಜಯ್ ಕುಮಾರ್, ಹತ್ಯೆಯಾದ ಉಗ್ರ ಪಾಕಿಸ್ಥಾನಿ ಪ್ರಜೆ ಮತ್ತು ಜೆಎಂ ಸಂಘಟನೆಗೆ ಸೇರಿದವ ಎಂದು ಟ್ವಿಟರ್ನಲ್ಲಿ ಬರೆದಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.