ಕನ್ನಡದಲ್ಲೂ ಬರಲಿದೆ ‘ದಿ ಕಾಶ್ಮೀರ್​ ಫೈಲ್ಸ್​’?

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ದಿ ಕಾಶ್ಮೀರಿ ಫೈಲ್ಸ್ ಚಿತ್ರ ಈಗಾಗಲೇ ತೆರೆಯಲ್ಲಿ ಜನರ ಮನಸ್ಸು ಗೆಲ್ಲುತ್ತಿದ್ದು, ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ಈ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ರಾಜಕೀಯ ವಲಯದಲ್ಲೂ ಈ ಸಿನಿಮಾ ದೊಡ್ಡ ಮಟ್ಟದ ಚರ್ಚೆ ಸೃಷ್ಟಿ ಮಾಡಿದೆ.
ಇದೀಗ ಈ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡೋ ಚಿಂತನೆಯಲ್ಲಿ ಬಿಜೆಪಿ ಇದೆ ಎನ್ನಲಾಗುತ್ತಿದೆ. ಹೀಗಾಗಿ ದಿ ಕಾಶ್ಮೀರಿ ಫೈಲ್ಸ್ ಚಿತ್ರದ ಕನ್ನಡದಲ್ಲಿ ಬರುವ ನಿರೀಕ್ಷೆಯಿದೆ.
ಇತ್ತೀಚೆಗೆ ವಿಧಾನಸಭೆ ಹಾಗೂ ಪರಿಷತ್ ಸಚಿವಾಲಯದಿಂದ ಶಾಸಕರಿಗೆ ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರವನ್ನು ಪ್ರದರ್ಶನ ಮಾಡಲಾಗಿತ್ತು. ಈ ವೇಳೆ ಬಿಜೆಪಿ ನಾಯಕರು ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಈಗ ಈ ಚಿತ್ರವನ್ನು ಜನರ ಮುಂದೆ ಕನ್ನಡದಲ್ಲಿ ಇಡಲು ಚಿಂತನೆ ನಡೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಆಪ್ತ ಸಚಿವರ ಜತೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಇಂದು ಸ್ವತಹ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಮಾತನಾಡಿದ್ದು, ಈಗ ಹಿಂದಿಯಲ್ಲಿ ಚಿತ್ರ ಬಂದಿದೆ ಯಶಸ್ವಿಯಾಗಿ ಪ್ರದರ್ಶನ ಆಗುತ್ತಿದೆ. ಈ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡಿ ತರಬೇಕು ಅಂತ ಯೋಚನೆ ಮಾಡಿದ್ದೇವೆ. ಈ ವಿಚಾರವಾಗಿ ನನ್ನ ಸ್ನೇಹಿತರ ಬಳಿ ಚರ್ಚೆ ಸಹ ಮಾಡಿದ್ದೇನೆ ಎಂದರು.
ಕನ್ನಡದಲ್ಲಿ ಬಂದ್ರೆ ಇಲ್ಲಿನವರು ನೋಡಲು ಅನುಕೂಲವಾಗುತ್ತದೆ. ಏಕೆಂದರೆ ಇಲ್ಲಿ ಎಲ್ಲರಿಗೂ ಹಿಂದಿ ಬರಲ್ಲ. ದಿ ಕಾಶ್ಮೀರ್ ಪೈಲ್ಸ ಒಂದು ಉತ್ತಮವಾದ ಚಿತ್ರವಾಗಿದೆ. ಪಂಡಿತರ ಮೇಲೆ ನಡೆದಿದ್ದ ದೌರ್ಜನ್ಯ ಎಲ್ಲರಿಗೂ ತಿಳಿಬೇಕು. ಈ ಹಿನ್ನೆಲೆಯಲ್ಲಿ ಕನ್ನಡದಲ್ಲಿ ಡಬ್ ಮಾಡಿ ತರಲು ಯೋಚನೆ ಮಾಡ್ತಾ ಇದ್ದೇವೆ ಎಂದು ತಿಳಿಸಿದರು.
ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡ ಈ ವಿಚಾರಕ್ಕೆ ಧ್ವನಿಗೂಡಿಸಿದ್ದಾರೆ. ‘ಈಗ ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಹಿಂದಿಯಲ್ಲಿ ಬಿಡುಗಡೆ ಆಗಿದೆ. ಈ ಚಿತ್ರ ಕನ್ನಡಕ್ಕೂ ಡಬ್​ ಆಗಿ ತೆರೆಕಾಣಬೇಕು. ಕನ್ನಡದಲ್ಲಿ ಬಂದರೆ ಹಿಂದಿ ಬಾರದವರಿಗೂ ಸಿನಿಮಾ ಅರ್ಥ ಆಗುತ್ತದೆ’ ಎಂದಿದ್ದಾರೆ ಅವರು.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!