ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳವಾರ ಮಧ್ಯಾಹ್ನ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ದೇಶವೇ ಆಘಾತಕ್ಕೊಳಗಾಗಿದ್ದು, ಬಾಲಿವುಡ್ ಸೆಲೆಬ್ರಿಟಿಗಳು ಕೂಡ ದಾಳಿಯಲ್ಲಿ ಮೃತಪಟ್ಟವರ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಈ ಹೇಯ ಕೃತ್ಯದಲ್ಲಿ ಅಮಾಯಕ ಜನರನ್ನು ಗುರಿಯಾಗಿಸಿಕೊಂಡಿರುವುದನ್ನು ಸಲ್ಮಾನ್ ಖಾನ್ ಖಂಡಿಸಿದ್ದಾರೆ.
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಸಲ್ಮಾನ್ ದುಃಖ ವ್ಯಕ್ತಪಡಿಸಿದರು. “ಭೂಮಿಯ ಮೇಲಿನ ಸ್ವರ್ಗವಾದ ಕಾಶ್ಮೀರ ನರಕವಾಗಿ ಬದಲಾಗುತ್ತಿದೆ. ಮುಗ್ಧ ಜನರನ್ನು ಗುರಿಯಾಗಿಸಲಾಗುತ್ತಿದೆ. ನನ್ನ ಹೃದಯವು ಅವರ ಕುಟುಂಬಗಳಿಗೆ ಮಿಡಿಯುತ್ತದೆ. ಒಬ್ಬ ಮುಗ್ಧ ವ್ಯಕ್ತಿಯನ್ನು ಕೊಲ್ಲುವುದು ಇಡೀ ವಿಶ್ವವನ್ನೇ ಕೊಂದಂತೆ” ಎಂದು ಸಲ್ಮಾನ್ ಖಾನ್ ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇನ್ನು ಈ ಬಗ್ಗೆ ಆಲಿಯಾ ಭಟ್, ಪ್ರಿಯಾಂಕಾ ಚೋಪ್ರಾ, ಕರೀನಾ ಕಪೂರ್, ಅಕ್ಷಯ್ ಕುಮಾರ್, ಮೋಹನ್ ಲಾಲ್, ಚಿರಂಜೀವಿ, ಪವನ್ ಕಲ್ಯಾಣ್ ಮತ್ತು ಇತರ ಹಲವಾರು ತಾರೆಯರು ಈ ದಾಳಿಯ ಬಗ್ಗೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.