ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೊಂಡಿರುವ ಸುದ್ದಿ ಹೊರಬಿದ್ದ ಬಳಿಕ ಕಾಶ್ಮೀರದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಜೋರಾಗಿವೆ. ಶ್ರೀನಗರ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಜನರು ಬೀದಿಗಿಳಿದು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಲವರು ಖಮೇನಿ ಚಿತ್ರಗಳನ್ನು ಹಿಡಿದು ಶೋಕಾಚರಣೆ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿರಲು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ಇದೇ ವೇಳೆ ಪಾಕಿಸ್ತಾನದಲ್ಲಿರುವ ಅಮೆರಿಕ ರಾಯಭಾರ ಕಚೇರಿ ಸಮೀಪ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಪ್ರತಿಭಟನಾಕಾರರು ಕಚೇರಿ ಹೊರಭಾಗದಲ್ಲಿ ಕಲ್ಲು ತೂರಾಟ ನಡೆಸಿದರೆಂದು ವರದಿಯಾಗಿದೆ. ಭದ್ರತಾ ಸಿಬ್ಬಂದಿ ಜನರನ್ನು ಚದುರಿಸಲು ಕ್ರಮ ಕೈಗೊಂಡಿದ್ದು, ಕೆಲವೆಡೆ ಸಣ್ಣ ಮಟ್ಟಿನ ಘರ್ಷಣೆಗಳೂ ನಡೆದಿವೆ ಎನ್ನಲಾಗಿದೆ.
ಇದನ್ನೂ ಓದಿ:
ಖಮೇನಿ ಸಾವಿನ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯ ಹಾಗೂ ದಕ್ಷಿಣ ಏಷ್ಯಾದ ಕೆಲವು ಭಾಗಗಳಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವುದು ಗೋಚರಿಸಿದೆ. ಮುಂದಿನ ದಿನಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಇನ್ನಷ್ಟು ಕಟ್ಟು ನಿಟ್ಟಾಗಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



