ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ: ಜೈಶ್-ಎ-ಮೊಹಮ್ಮದ್ ಸಂಘಟನೆಯ 8 ಉಗ್ರಸಹಚರರು ಸೆರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭದ್ರತಾ ಪಡೆಗಳು 8 ಭಯೋತ್ಪಾದಕ ಸಹಚರರನ್ನು ಬಂಧಿಸಿವೆ.
ಈ ಅವಂತಿಪೋರಾದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಭಯೋತ್ಪಾದನಾ ಘಟಕವನ್ನು ಭೇದಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳ ಜಂಟಿ ತಂಡವು ಅವಂತಿಪೋರಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆ ಜೆಎಂನ ಭಯೋತ್ಪಾದಕ ಘಟಕವನ್ನು ಭೇದಿಸಲು ಸಾಧ್ಯವಾಯಿತು. ಬಂಧಿತರಿಂದ ಮದ್ದುಗುಂಡುಗಳು ಸೇರಿದಂತೆ ಅಪಾರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಪರಾಧ ಕೃತ್ಯಕ್ಕೆ ಬಳಸಿದ್ದ ವಾಹನವನ್ನೂ ವಶಪಡಿಸಿಕೊಳ್ಳಲಾಗಿದೆ.
ಉಗ್ರ ಸಹಚರರನ್ನು ಅವಂತಿಪೋರಾ ಉಪ ಜಿಲ್ಲೆಯ ನಿವಾಸಿಗಳಾದ ಮುಷ್ತಾಕ್ ಅಹ್ಮದ್ ದಾರ್, ಇಶ್ಫಾಕ್ ಅಹ್ಮದ್ ದಾರ್, ಮಂಜೂರ್ ಅಹ್ಮದ್ ದಾರ್, ಫಯಾಜ್ ಅಹ್ಮದ್ ರಾಥರ್, ಶಬೀರ್ ಅಹ್ಮದ್ ರಾಥರ್, ಮೊಹಮ್ಮದ್ ಲತೀಫ್ ರಾಥರ್, ಶೀರಾಜ್ ಅಹ್ಮದ್ ಮಿರ್ ಮತ್ತು ವಸೀಮ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ.
ಬಂಧಿತರು ಇಬ್ಬರು ಸಕ್ರಿಯ ಭಯೋತ್ಪಾದಕರಿಗೆ ಆಶ್ರಯ, ಲಾಜಿಸ್ಟಿಕ್ಸ್ ಮತ್ತು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಾಗಣೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!