ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೇನಾ ವಾಹನ ಸ್ಕಿಡ್ ಆಗಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದ್ದಾರೆ.
ಕುಲ್ಗಾಮ್‌ನ ಡಿ ಎಚ್ ಪೋರಾ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಕಾರ್ಯಾಚರಣೆ ನಡೆಸುವಾಗ ಈ ಅಪಘಾತ ಸಂಭವಿಸಿದೆ ಎಂದು ಸೇನೆಯ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ತಿಳಿಸಿದೆ.
“ಅಪಘಾತದಲ್ಲಿ ಒಬ್ಬ ಸಿಪಾಯಿ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇನ್ನೂ ಕೆಲವು ಸೈನಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲಾ ಸೈನಿಕರ ಆರೋಗ್ಯ ಸ್ಥಿರವಾಗಿದೆ” ಚಿನಾರ್ ಕಾರ್ಪ್ಸ್ ಹೇಳಿದೆ.