spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಸ್ತೂರಿ ರಂಗನ್ ವರದಿ: ಸಚಿವ ಭೂಪೇಂದ್ರ ಯಾದವ್ ಗೆ ಸಾಧಕ-ಬಾಧಕಗಳ ವಿವರಣೆ ನೀಡಿದ ಸಂಸದ ರಾಘವೇಂದ್ರ

- Advertisement -Nitte

ಹೊಸ ದಿಗಂತ ವರದಿ, ಶಿವಮೊಗ್ಗ:

ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಶನಿವಾರ ನವದೆಹಲಿಯಲ್ಲಿ ಭೇಟಿ ಮಾಡಿ ಕಸ್ತೂರಿ ರಂಗನ್ ವರದಿಯ ಅನುಷ್ಠಾನದಿಂದ ಆಗುವ ಸಮಸ್ಯೆಗಳ ಬಗ್ಗೆ ಹಾಗೂ ಕೆಲವು ನಿರ್ಬಂಧಗಳನ್ನು ಸಡಿಲಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದರು.
ಕಸ್ತೂರಿ ರಂಗನ್ ವರದಿ ಪ್ರಕಾರ ಕರ್ನಾಟಕದಲ್ಲಿ ಪ್ರಸ್ತಾಪಿಸಲಾದ ಪರಿಸರ ಸೂಕ್ಷ್ಮ ಪ್ರದೇಶ ಅಡಿಯಲ್ಲಿ 1543 ಗ್ರಾಮಗಳು ಬರುತ್ತವೆ. ಅದರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂದಾಜು 50 ಗ್ರಾಮಗಳು ಬರುತ್ತವೆ. ಪಶ್ಚಿಮಘಟ್ಟದ ಕಾಡಿನ ಗ್ರಾಮಗಳಲ್ಲಿ ಹಾಗೂ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರು ಪ್ರಕೃತಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ ಮನೋಭಾವ ಹೊಂದಿ ಸಂರಕ್ಷಿಸುತ್ತಿರುವ ಕಾರಣದಿಂದಲೇ ಸುಮಾರು ಶೇ.60 ಭೂ ಪ್ರದೇಶ ಸಮೃದ್ಧ ಅರಣ್ಯವಾಗಿದೆ.
ಹಾಗಾಗಿ ವರದಿಯಲ್ಲಿ ಇರವಂತೆ ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿುವ ಗ್ರಾಮಗಳನ್ನು ಹೊರತುಪಡಿಸಿ,ಸಂಪೂರ್ಣ ಅರಣ್ಯ ಪ್ರದೇಶ ಮತ್ತು ಅರಣ್ಯ ಸಂರಕ್ಷಿತ ಪ್ರದೇಶಗಳಲ್ಲಿ ಮಾತ್ರ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಬೇಕು ಎಂದು ಕೋರಿದರು.
ಕರ್ನಾಟಕ ಸರ್ಕಾರದ ಅರಣ್ಯ ಸಚಿವ ಆನಂದ್ ಸಿಂಗ್, ಗೃಹ ಸಚಿವ ಆರಗ ಜ್ಞಾನೇಂದ್ರ, ಸಾಗರ ಶಾಸಕ ಹರತಾಳು ಹಾಲಪ್ಪ ನಿಯೋಗದಲ್ಲಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss