ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿ ಕಂಪ್ಲೀಟ್‌ ಆಗಿ ಜಾರಿ ಮಾಡಕ್ಕಾಗೋದಿಲ್ಲ: ಖಂಡ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಸ್ತೂರಿರಂಗನ್ ಸಮಿತಿಯ ಶಿಫಾರಸುಗಳನ್ನು ಕರ್ನಾಟಕ ಸರ್ಕಾರ ಪೂರ್ಣವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬುಧವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ನೀಡಿದ ಸಲಹೆಗಳ ಆಧಾರದ ಮೇಲೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕರ್ನಾಟಕ ವ್ಯಾಪ್ತಿಯಲ್ಲಿ 20,668 ಚದರ ಕಿಲೋಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಅಧಿಸೂಚನೆ ಹೊರಡಿಸುವ ಸಮಿತಿಯ ಶಿಫಾರಸುಗಳನ್ನು ಪೂರ್ಣವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಅಭಯಾರಣ್ಯಗಳು, ರಾಷ್ಟ್ರೀಯ ಉದ್ಯಾನವನಗಳು ಮತ್ತು ಪರಿಸರ ಸೂಕ್ಷ್ಮ ವಲಯಗಳಂತಹ ವಿವಿಧ ರೂಪಗಳಲ್ಲಿ 16,632 ಚದರ ಕಿ.ಮೀ. ಪ್ರದೇಶವನ್ನು ಅಭಯಾರಣ್ಯ ಎಂದು ಘೋಷಿಸಿದೆ. ಉಳಿದ ಪ್ರದೇಶದಲ್ಲಿ 1,533 ಮನೆಗಳು, ಗ್ರಾಮಗಳು ಮತ್ತು ಇತರ ವಸತಿ ಆವಾಸಸ್ಥಾನಗಳಿವೆ. ಜನರ ಹಕ್ಕುಗಳು ಮತ್ತು ಜೀವನೋಪಾಯವನ್ನು ರಕ್ಷಿಸಬೇಕಾಗಿದೆ ಎಂದು ಹೇಳಿದರು.

ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಮಾಡಿದ ಚರ್ಚೆ ಹಾಗೂ ಶಿಫಾರಸುಗಳನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ತಲುಪಿಸಿ, ಸಚಿವ ಸಂಪುಟ ಅಂತಿಮ ತೀರ್ಮಾನ ಕೈಗೊಂಡು ಕೇಂದ್ರಕ್ಕೆ ತಿಳಿಸಲಾಗುವುದು ಎಂದು ಖಂಡ್ರೆ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!