ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಥುವಾ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಐವರು ಸೇನಾ ಸಿಬ್ಬಂದಿ ಹುತಾತ್ಮರಾದ ನಂತರ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಭಯೋತ್ಪಾದಕರು ಸೇನಾ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ ನಂತರ ಐವರು ಸೈನಿಕರು ಹುತಾತ್ಮರಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ಸೋಮವಾರ ಮಧ್ಯಾಹ್ನ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ದೂರದ ಮಚೇಡಿ ಪ್ರದೇಶದಲ್ಲಿ ಸೈನಿಕರು ಮತ್ತು ಭಯೋತ್ಪಾದಕರ ನಡುವೆ ಇನ್ನೂ ಎನ್‌ಕೌಂಟರ್ ನಡೆಯುತ್ತಿದೆ ಎಂದು ಸೇನೆ ತಿಳಿಸಿದೆ. ದಾಳಿಯ ನಂತರ, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್ ಪಡೆ, ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಯನ್ನು ಉಧಮ್‌ಪುರದ ರಾಷ್ಟ್ರೀಯ ಹೆದ್ದಾರಿ ಉದ್ದಕ್ಕೂ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಮರನಾಥ ಯಾತ್ರಾರ್ಥಿಗಳ 11ನೇ ಬ್ಯಾಚ್ ಇಂದು ಬೆಳಗ್ಗೆ ಉಧಂಪುರ ಮೂಲಕ ಹಾದು ಹೋಗಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಯಾತ್ರಾರ್ಥಿಗಳ ಸುರಕ್ಷತೆಗಾಗಿ ಭದ್ರತಾ ಪಡೆಗಳಿಂದ ಬಹು ಹಂತದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ದಾಳಿಯಲ್ಲಿ ಗಾಯಗೊಂಡ ಐವರು ಯೋಧರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಠಾಣ್‌ಕೋಟ್‌ನ ಮಿಲಿಟರಿ ಆಸ್ಪತ್ರೆಗೆ ರವಾನಿಸಲಾಗಿದೆ.