ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳದಲ್ಲಿ ದಿನನಿತ್ಯ ಕೋಟಿ ಕೋಟಿ ಸಂಖ್ಯೆಯಲ್ಲಿ ಭಕ್ತರು ಪುಣ್ಯ ಸ್ನಾನ ಮಾಡುತ್ತಿದ್ದಾರೆ . ಇಂದು ಬಾಲಿವುಡ್ ಸ್ಟಾರ್ ನಟಿ ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ.
ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ಅವರು ಪ್ರಯಾಗ್ರಾಜ್ಗೆ ತೆರಳಿದ್ದಾರೆ. ಮಹಾ ಕುಂಭಮೇಳದಲ್ಲಿ ಅವರು ಭಾಗಿಯಾಗಿದ್ದಾರೆ. ಅಲ್ಲದೇ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಇಲ್ಲಿಗೆ ಬಂದಿರುವ ನಾನು ಪುಣ್ಯವಂತೆ. ತುಂಬ ಖುಷಿ ಆಗುತ್ತಿದೆ. ಇದು ಬಹಳ ಸುಂದರವಾದ ಸ್ಥಳ. ಈಗ ನಾನು ಸ್ವಾಮಿಜಿ ಜೊತೆ ಇದ್ದೇನೆ. ಅವರ ಆಶೀರ್ವಾದ ಪಡೆದಿದ್ದೇನೆ.ಕುಂಭಮೇಳದ ಅನುಭವ ಪಡೆಯಲು ಈಗಷ್ಟೇ ಆರಂಭಿಸಿದ್ದೇನೆ ಎಂದು ಹೇಳಿದ್ದಾರೆ.
ನಟಿ ಕತ್ರಿನಾ ಕೈಫ್ ಅವರು ಅತ್ತೆ ವೀಣಾ ಕೌಶಲ್ ಅವರೊಂದಿಗೆ ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು. ಈ ಇಬ್ಬರೂ ಪರಮಾರ್ಥ ನಿಕೇತನಕ್ಕೆ ಭೇಟಿ ನೀಡಿ ತಮ್ಮ ಮಹಾಕುಂಭ ಶಿಬಿರದಲ್ಲಿ ತಂಗಿದರು.