ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ರಾಜ್ಯ ಕೌಶಲ್ಯ ವಿಶ್ವವಿದ್ಯಾಲಯವನ್ನು ‘ಪದ್ಮವಿಭೂಷಣ ರತನ್ ಟಾಟಾ ಮಹಾರಾಷ್ಟ್ರ ರಾಜ್ಯ ಕೌಶಲ್ಯ ವಿಶ್ವವಿದ್ಯಾಲಯ’ ಎಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಕೌಶಲ್ಯ ಅಭಿವೃದ್ಧಿ ಸಚಿವ ಮಂಗಲ್ ಪ್ರಭಾತ್ ಲೋಧಾ ಸೋಮವಾರ ತಿಳಿಸಿದ್ದಾರೆ .
ಅಕ್ಟೋಬರ್ 9 ರಂದು ಮುಂಬೈನಲ್ಲಿ ನಿಧನರಾದ ಭಾರತೀಯ ಐಕಾನ್ ಮತ್ತು ಕೈಗಾರಿಕೋದ್ಯಮಿ ರತನ್ ಟಾಟಾ ಅವರನ್ನು ಗೌರವಿಸಲು ಸರ್ಕಾರ ಈ ನಿರ್ಧಾರವನ್ನು ಪ್ರಕಟಿಸಿದೆ.
ಕೌಶಲ್ಯ ಅಭಿವೃದ್ಧಿ ಕ್ಷೇತ್ರಕ್ಕೆ ರತನ್ ಟಾಟಾ ಅವರ ಕೊಡುಗೆಗಳನ್ನು ಗೌರವಿಸಿ ಈ ಘೋಷಣೆ ಮಾಡಿದ್ದಾರೆ.
ಮುಂಬೈನ ಕೋಶಾಲಯ ವಿಶ್ವವಿದ್ಯಾಲಯಕ್ಕೆ ರತನ್ ಟಾಟಾ ಅವರ ಹೆಸರಿಡಲಾಗಿದೆ. ಹೆಸರು ಬದಲಾವಣೆಯ ನಂತರ, ವಿಶ್ವವಿದ್ಯಾಲಯದ ಹೆಸರನ್ನು ಈಗ ಪದ್ಮ ವಿಭೂಷಣ ರತನ್ ಟಾಟಾ ಮಹಾರಾಷ್ಟ್ರ ರಾಜ್ಯ ಕೌಶಲ್ಯ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು.