ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೆ.26ರಿಂದ ಕೆಆರ್‌ಎಸ್‌ನಲ್ಲಿ ಕನ್ನಡ ನಾಡಿನ ಜೀವನದಿ “ಕಾವೇರಿ ಆರತಿ” ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ.
ಸೆ.26ರ ಸಾಯಂಕಾಲ 5 ಗಂಟೆಗೆ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.