Sunday, December 10, 2023

Latest Posts

ಇಂದು ಕಾವೇರಿ ಪ್ರಾಧಿಕಾರ ಸಭೆ: ವಾಸ್ತವ ಸ್ಥಿತಿ ತಿಳಿಸುತ್ತೇವೆ ಎಂದ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿಗೆ 18  ದಿನಗಳ ಕಾಲ ನಿತ್ಯ 3,000 ಕ್ಯುಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ. ಈ ಬಗ್ಗೆ ನಿರ್ಣಯ ಕೈಗೊಳ್ಳುವ ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇಂದು ಸಭೆ ನಡೆಸಲಿದೆ.

ಇಡೀ ಕರ್ನಾಟಕದ ರೈತರ ಚಿತ್ತ ಇಂದಿನ ಸಭೆಯ ಮೇಲಿದ್ದು, ಇಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಎರಡೂ ರಾಜ್ಯಗಳು ತಮ್ಮ ಅಹವಾಲು ಮಂಡನೆ ಮಾಡಲಿದ್ದು, ನಮ್ಮ ರಾಜ್ಯದ ವಾಸ್ತವಿಕ ಸ್ಥಿತಿ ಬಗ್ಗೆ ತಿಳಿಸಿಕೊಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.

ಕಾವೇರಿ ವಿಚಾರವಾಗಿ ಕಾನೂನು ಹೋರಾಟ ತೀವ್ರಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಈಗಾಗಲೇ ಹಿರಿಯ ವಕೀಲು ಹಾಗೂ ಕಾನೂನು ತಜ್ಞರೊಂದಿಗೆ ಸಭೆ ನಡೆಸಲಾಗಿದೆ. ವಾಸ್ತವಿಕ ಸ್ಥಿತಿ ಪ್ರಸ್ತುತಪಡಿಸಿದ ನಂತರವೂ ಕಾವೇರಿ ಪ್ರಾಧಿಕಾರ ಯಾವ ನಿರ್ಧಾರ ಕೈಗೊಳ್ಳುತ್ತದೆ ಕಾದುನೋಡಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!