Thursday, December 8, 2022

Latest Posts

ನಾಳೆಯಿಂದ ಕಾವೇರಿ ನಿಸರ್ಗಧಾಮ ಬಂದ್

ಹೊಸದಿಗಂತ ವರದಿ,ಕುಶಾಲನಗರ:

ಕುಶಾಲನಗರದ ಪ್ರಮುಖ‌ ಪ್ರವಾಸಿ ತಾಣವಾದ ಕಾವೇರಿ‌ ನಿಸರ್ಗಧಾಮದಲ್ಲಿ ಕಾವೇರಿ‌ ನದಿಗೆ ಅಡ್ಡಲಾಗಿ ನಿರ್ಮಿಸಿರುವ ತೂಗು ಸೇತುವೆ ದುರಸ್ತಿ ಹಾಗೂ ನಿರ್ವಹಣೆ ಹಿನ್ನೆಲೆಯಲ್ಲಿ ನಾಳೆಯಿಂದ ಕೆಲ ದಿನಗಳ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಮಡಿಕೇರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.
ಇತ್ತೀಚೆಗೆ ಗುಜರಾತ್’ನಲ್ಲಿ ತೂಗುಸೇತುವೆ ಕುಸಿದು ನೂರಾರು ಮಂದಿ ಸಾವಿಗೀಡಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ನಿಸರ್ಗಧಾಮದ ತೂಗುಸೇತುವೆ ದುರಸ್ತಿಗೆ ಮುಂದಾಗಿರುವುದಾಗಿ ಹೇಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!