ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸಿದ ಕವಟಗಿಮಠ

ಹೊಸದಿಗಂತ ವರದಿ ಬೆಳಗಾವಿ:

ಮಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಸ್ಪರ್ಧೆ ಮಾಡಲು ಬಯಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ, ಜಿಲ್ಲೆಯ ಪ್ರಭಾವಿ ಧುರೀಣರಾದ ಮಹಾಂತೇಶ ಕವಟಗಿಮಠ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಅವಕಾಶ ಕೊಟ್ಟರೆ ಸ್ಪ್ರಧಿಸುವುದಾಗಿ ಹೇಳಿದರು.
ನಾನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನ ಪರಿಷತ್ ಅನ್ನು ಪ್ರತಿನಿಧಿಸಿದ್ದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಸಂಪೂರ್ಣ ಮಾಹಿತಿ ಇದೆ. ಅಷ್ಟೇ ಅಲ್ಲ ಜೆಲ್ಲೆಯ ಜನರ ಸಂಪರ್ಕದಲ್ಲಿ ಇದ್ದೇನೆ ಎಂದರು.

ಜಿಲ್ಲೆಯ ಎಲ್ಲ ಸಮುದಾಯದವರೊಂದಿಗೆ, ಎಲ್ಲ ಭಾಷಿಕರೊಂದಿಗೂ ಉತ್ತಮ ಬಾಂಧವ್ಯವನ್ನು ಹೊಂದಿದ್ದೇನೆ. ಜಿಲ್ಲೆಯ ರಾಜಕೀಯ ಕ್ಷೇತ್ರದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದೇನೆ. ಹೀಗಾಗಿ ಪಕ್ಷ ಅವಕಾಶ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳೆಲ್ಲವೂ ಫೇಲ್ ಆಗಿವೆ. ರಾಜ್ಯದ ಜನರು ಸಂಪೂರ್ಣವಾಗಿ ಅಸಮಾಧಾನಗೊಂಡಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಶತಸಿದ್ದ ಎಂದು ಮಹಾಂತೇಶ ಕವಟಗಿಮಠ ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!