Friday, December 9, 2022

Latest Posts

ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಯಾವುದೇ ನಾಟಕೀಯತೆಯಿಲ್ಲ, 2ದಿನದಲ್ಲಿ ಸಮಸ್ಯೆ ಬಗೆಹರಿಯಲಿದೆ-ವೇಣುಗೋಪಾಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಉತ್ತರಾಧಿಕಾರಿ ನೇಮಕದ ಕುರಿತು ರಾಜಸ್ಥಾನದಲ್ಲಿ ನಡೆಯುತ್ತಿರುವ ರಾಜಕೀಯ ನಾಟಕದ ಬಗ್ಗೆ ರಾಜ್ಯದಲ್ಲಿ ಯಾವುದೇ ರಾಜಕೀಯ ಬಿಕ್ಕಟ್ಟು ಇಲ್ಲ ಮತ್ತು ಎರಡು ದಿನಗಳಲ್ಲಿ ಎಲ್ಲವೂ ಬಗೆಹರಿಯಲಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಗೆಹ್ಲೋಟ್ ದೆಹಲಿಗೆ ಹೋದರೆ ಸಚಿನ್ ಪೈಲಟ್ ಅವರನ್ನು ರಾಜಸ್ಥಾನ ಸಿಎಂ ಆಗಿ ನೇಮಿಸಲು ಹೈಕಮಾಂಡ್ ಚಿಂತನೆ ನಡೆಸಿದೆ. ಆದರೆ ಈ ನಿರ್ಧಾರದ ವಿರುದ್ಧ, ಅನೇಕ ಗೆಹ್ಲೋಟ್ ಪರ ಶಾಸಕರು ಬಂಡಾಯವೆದ್ದರು.

ಈ ಬಗ್ಗೆ ಕಾಂಗ್ರೆಸ್‌ನ ಹಿರಿಯ ನಾಯಕ ಕೆ.ಸಿ.ವೇಣುಗೋಪಾಲ್ ಟ್ವೀಟ್‌ ಮಾಡಿದ್ದು, ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಯಾವುದೇ ನಾಟಕೀಯತೆ ಇಲ್ಲ. ಇನ್ನೆರಡು ದಿನಗಳಲ್ಲಿ ಸುಸೂತ್ರವಾಗಿ ಎಲ್ಲವೂ ಪೂರ್ಣಗೊಳ್ಳಲಿದೆ ಎಂದು ವೇಣುಗೋಪಾಲ್ ತಿಳಿಸಿದರು.

ಇನ್ನು ನಿನ್ನೆ ಸಂಜೆ ದೆಹಲಿಯಲ್ಲಿ ಸೋನಿಯಾ ಅವರನ್ನು ಭೇಟಿಯಾದ ಗೆಹ್ಲೋಟ್ 102 ಶಾಸಕರ ಅಭಿಪ್ರಾಯವನ್ನು ಪಕ್ಷದ ಕೇಂದ್ರ ನಾಯಕತ್ವಕ್ಕೆ ವಿವರಿಸಿದರು. ರಾಜಸ್ಥಾನದಲ್ಲಿ ಗೆಹ್ಲೋಟ್ ಅವರನ್ನು ಬೆಂಬಲಿಸಿ ಪಕ್ಷದ ನಾಯಕತ್ವದ ವಿರುದ್ಧ ಬಂಡಾಯವೆದ್ದ ಶಾಸಕರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಹೇಳಿದ್ದಾರೆ. ಅಶೋಕ್ ಗೆಹ್ಲೋಟ್ ಜತೆ ಮಾತನಾಡಿದ್ದೇನೆ, ನಾಲ್ಕೈದು ಶಾಸಕರು ಈ ರೀತಿ ವರ್ತಿಸಿದ್ದಾರೆ. ಶೋಕಾಸ್ ನೋಟಿಸ್ ನೀಡಲಾಗಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!