ಕೆಸಿಇಟಿ 2023 : ಆನ್‌ಲೈನ್‌ ನೊಂದಣಿ ಪ್ರಕ್ರಿಯೆ ಇಂದಿನಿಂದ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (CET 2023) ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇಂದಿನಿಂದ ಕೆಸಿಇಟಿ ಪರೀಕ್ಷೆಗೆ ಆನ್‌ಲೈನ್‌ ನೊಂದಣಿ ಪ್ರಕ್ರಿಯೆ ಆರಂಭವಾಗಲಿದೆ. ಆಸಕ್ತರು ಇಂದಿನಿಂದ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಪ್ರಮುಖ ದಿನಾಂಕಗಳು :

  • ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : ಮಾರ್ಚ್‌ 02,2023
  • ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್‌ 05,2023
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್‌ 07,2023

ಅರ್ಜಿ ಸಲ್ಲಿಸುವುದು ಹೇಗೆ? :

  • ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
  • ಹೋಂ ಪೇಜ್‌ನಲ್ಲಿ ‘KCET Online Registration Link’ ಗೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ, ನೊಂದಣಿ ಮಾಡಿಕೊಳ್ಳಿ.

ಸಾಮಾನ್ಯ ಪ್ರವೇಶ ಪರೀಕ್ಷೆ-2023ರ ವೇಳಾಪಟ್ಟಿ :
20-05-2023 – ಶನಿವಾರ – ಬೆಳಗ್ಗೆ 10.30 ರಿಂದ 11.50ರವರೆಗೆ – ಜೀವಶಾಸ್ತ್ರ
ಮಧ್ಯಾಹ್ನ 2.30 ರಿಂದ 3.50ರವರೆಗೆ- ಗಣಿತ ಶಾಸ್ತ್ರ
21-05-2023 – ಬೆಳಗ್ಗೆ 10.30 ರಿಂದ 11.50ರವರೆಗೆ – ಭೌತಶಾಸ್ತ್ರ.
ಮಧ್ಯಾಹ್ನ 2.30 ರಿಂದ 3.50ರವರೆಗೆ- ರಸಾಯನಶಾಸ್ತ್ರ.

ಕನ್ನಡ ಭಾಷಾ ಪರೀಕ್ಷೆ :
ಬೆಂಗಳೂರು, ಬೀದರ್, ಬೆಳಗಾವಿ, ಬಳ್ಳಾರಿ, ವಿಜಯಪುರ, ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುತ್ತದೆ.

22-05-2023 – ಬೆಳಗ್ಗೆ 11.30 ರಿಂದ 12.30ರವರೆಗೆ – ಹೊರನಾಡು ಮತ್ತು ಗಡಿನಾಡು ಕನ್ನಡ ವಿದ್ಯಾರ್ಥಿಗಳಿಗೆ ನಡೆಸಲಾಗುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!