ʼತೆಲಂಗಾಣ ರಾಷ್ಟ್ರ ಸಮಿತಿʼ ಇನ್ಮುಂದೆ ʼಭಾರತ್ ರಾಷ್ಟ್ರ ಸಮಿತಿ: ಅಧಿಕೃತ ಮಾನ್ಯತೆ ನೀಡಿದ ಚುನಾವಣಾ ಆಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ತೆಲಂಗಾಣ ರಾಷ್ಟ್ರ ಸಮಿತಿ( ಟಿಆರ್‌ಎಸ್) ಪಕ್ಷವು ತನ್ನ ಹೆಸರನ್ನು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂದು ಬದಲಾಯಿಸಲು ಚುನಾವಣಾ ಆಯೋಗವು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಇಂದು ಭಾರತ್ ರಾಷ್ಟ್ರ ಸಮಿತಿ ಪಕ್ಷದ ಧ್ವಜಾರೋಹಣ ನೆರವೇರಿಸಿದರು.
ರಾವ್ ಅವರು ಹೈದರಾಬಾದ್‌ನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಆರ್‌ಎಸ್ ಧ್ವಜಾರೋಹಣ ಮಾಡಿದರು. ಇದಕ್ಕೂ ಮುನ್ನ ಅವರು ಪಕ್ಷದ ಹೆಸರನ್ನು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಎಂದು ಬದಲಾಯಿಸುವ ಕುರಿತ ಪತ್ರಗಳಿಗೆ ಸಹಿ ಹಾಕಿದ್ದರು. ಈ ಸಂದರ್ಭದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಜನಪ್ರಿಯ ನಟ ಪ್ರಕಾಶ್ ರಾಜ್ ಮತ್ತು ಹಲವಾರು ಬಿಆರ್‌ಎಸ್ ಮುಖಂಡರು ಉಪಸ್ಥಿತರಿದ್ದರು.
ಮುಂದಿನ ಲೋಕಸಭಾ ಚುನಾವಣೆಗೆ ರಾಷ್ಟ್ರ ರಾಜಕಾರಣದತ್ತ ಕಣ್ಣಿಟ್ಟಿರುವ ಕೆಸಿಆರ್‌ ಆವರ ಟಿಆರ್‌ಎಸ್ ಪಕ್ಷವು ಅಕ್ಟೋಬರ್‌ನಲ್ಲಿ ತನ್ನ ಹೆಸರನ್ನು ಬಿಆರ್‌ಎಸ್ ಎಂದು ಬದಲಾಯಿಸಿತು. ಇದೀಗ ಅದಕ್ಕೆ ಅಧಿಕೃತ ಮಾನ್ಯತೆ ದೊರೆತಿದೆ.
ಅವಿಭಜಿತ ಆಂಧ್ರಪ್ರದೇಶದಿಂದ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗಾಗಿ ಹೋರಾಡಲು ರಾವ್ 2001 ರಲ್ಲಿ ತೆಲಂಗಾಣ ರಾಷ್ಟ್ರ ಸಮಿತಿಯನ್ನು ರಚಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!