ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರೋಪಿಗಳ ಪತ್ತೆಗೆ ನಾಲ್ಕು ತಂಡಗಳ ರಚನೆ

ಹೊಸದಿಗಂತ ವರದಿ, ಕಲಬುರಗಿ:

ಕೆಇಎ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ ಅಶೋಕ್ ನಗರ ಪೊಲೀಸ್ ಠಾಣೆ ಹಾಗೂ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಭಾಗಿಯಾರುವ ಆರೋಪಿಗಳನ್ನು ಪತ್ತೆ ಹಚ್ಚಲು ಕಲಬುರಗಿ ನಗರ ಉಪ ಪೊಲೀಸ್ ಆಯುಕ್ತರಾದ (ಕಾ&ಸು) ಕನ್ನಿಕಾ ಸಿಕ್ರಿವಾಲ್ ಅವರ ಉಸ್ತುವಾರಿಯಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಬುಧವಾರ ಕಲಬುರಗಿ ನಗರ ಪೊಲೀಸ್ ಆಯುಕ್ತ ಚೇತನ್ ಆರ್ ತಿಳಿಸಿದ್ದಾರೆ.

ದಕ್ಷಿಣ ಉಪ ವಿಭಾಗದ ಎಸಿಪಿ ಭೂತೇಗೌಡ ವಿ. ಎಸ್, ಸಬ್ ಅರ್ಬನ್ ಉಪ ವಿಭಾಗ ಎಸಿಪಿ ಡಿ. ಜಿ. ರಾಜಣ್ಣ, ಅಶೋಕ್ ನಗರ ಠಾಣೆ ಪಿಐ ಅರುಣಕುಮಾರ್, ಫರತಾಬಾದ್ ಠಾಣೆ ಪಿಐ ಮಲ್ಲಿಕಾರ್ಜುನ ಇಕ್ಕಳಕಿ ಅವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ.

ಎರಡು ಪ್ರಕರಣಗಳಲ್ಲಿ ಭಾಗಿಯಾಗಿರುವ ಇನ್ನುಳಿದ ಆರೋಪಿತರನ್ನು ಶೀಘ್ರದಲ್ಲಿ ಪತ್ತೆ ಹಚ್ಚಲು ಈ ತಂಡಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!