ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಪ್ರಾಂಶುಪಾಲ ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌ 

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 310 ಪ್ರಾಂಶುಪಾಲರು ಗ್ರೇಡ್-‌1 ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಫೆಬ್ರವರಿ 10,2023ರ ವರೆಗೆ ವಿಸ್ತರಿಸಲಾಗಿದೆ.

ಖಾಲಿ ಹುದ್ದೆಗಳ ವಿವರ :
ರಾಜ್ಯವ್ಯಾಪಿ ಮಿಕ್ಕುಳಿದ ವೃಂದ – 265 ಹುದ್ದೆಗಳು
ಕಲ್ಯಾಣ ಕರ್ನಾಟಕ ವೃಂದ – 45 ಹುದ್ದೆಗಳು
ಒಟ್ಟು 310 ಹುದ್ದೆಗಳು

ವಿದ್ಯಾರ್ಹತೆ ಮತ್ತು ವಯೋಮಿತಿ :
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಪ್ರಾಂಶುಪಾಲರು ಗ್ರೇಡ್-‌1 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ :
ಪ್ರಾಂಶುಪಾಲರು ಗ್ರೇಡ್-‌1 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :
ಪ್ರಾಂಶುಪಾಲರು ಗ್ರೇಡ್-‌1 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 5000/-ರೂ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳು 2500/-ರೂ ಅರ್ಜಿ ಶುಲ್ಕವನ್ನು ಇ-ಪೋಸ್ಟ್‌ ಆಫೀಸ್‌ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ :
ಪ್ರಾಂಶುಪಾಲರು ಗ್ರೇಡ್-‌1 ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 10ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!