JOB| ಕೆಇಎ ನೇಮಕಾತಿ: 100 ಸ್ಟಾಫ್‌ ನರ್ಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ವೃಂದದ 100 ಸ್ಟಾಫ್‌ ನರ್ಸ್‌ (ಶುಶ್ರೂಷಾಧಿಕಾರಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ನರ್ಸಿಂಗ್‌ ಪ್ರಮಾಣಪತ್ರದೊಂದಿಗೆ ನರ್ಸಿಂಗ್‌ ಕೌನ್ಸಿನ್‌ನಿಂದ ನೊಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನವೆಂಬರ್‌ 2,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33,450/- ರಿಂದ 62,600/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ನವೆಂಬರ್‌ 2,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!