JOB| ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ನೇಮಕಾತಿ: ಅರ್ಜಿ ಸಲ್ಲಿಕೆಗೆ ಮತ್ತೊಮ್ಮೆ ಅವಧಿ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಒಟ್ಟು 607 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಈ ಮುಂಚೆ ಅರ್ಜಿ ಸಲ್ಲಿಸಲು ಜುಲೈ 22ರ ವರೆಗೆ ಅವಕಾಶ ನೀಡಲಾಗಿತ್ತು. ತದನಂತರ ಜುಲೈ 31,2023ರ ವರೆಗೆ ಅವಧಿ ವಿಸ್ತರಿಸಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್‌ 7,2023 ಕೊನೆಯ ದಿನವಾಗಿರುತ್ತದೆ.

ಹುದ್ದೆಗಳಿಗನುಸಾರ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,600/- ರಿಂದ 97,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಆಗಸ್ಟ್‌ 7,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!