ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪ್ರೋಗ್ರಾಮರ್‌ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರೋಗ್ರಾಮರ್ ಹುದ್ದೆಗಳನ್ನು ‌ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ವಿದ್ಯಾರ್ಹತೆ ಮತ್ತು ವಯೋಮಿತಿ :
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು‌ ಎಂಸಿಎ/ಎಂ.ಟೆಕ್/ಬಿ.ಇ/ಬಿ.ಟೆಕ್/ಎಂ.ಟೆಕ್‌, ಬಿಸಿಎ ವಿದ್ಯಾರ್ಹತೆ ಮತ್ತು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ :
ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಾಯೋಗಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ :
ಪ್ರೋಗ್ರಾಮರ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ತಮ್ಮ ಸ್ವವಿವರವನ್ನು [email protected] ವಿಳಾಸಕ್ಕೆ ಮೇಲ್‌ ಮಾಡುವ ಮೂಲಕ ಜನವರಿ 14,2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!