ಕೆಇಎ ನೇಮಕಾತಿ ಪರೀಕ್ಷೆ ಅಕ್ರಮ: ಇಬ್ಬರು ಪ್ರಾಂಶುಪಾಲರ ಬಂಧನ

ಹೊಸದಿಗಂತ ವರದಿ, ಕಲಬುರಗಿ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಳೆದ ೨೮ರಂದು ನಡೆಸಿದ ವಿವಿಧ ಸ್ಪರ್ಧಾತ್ಮಕ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಬುಧವಾರ ಸಿಐಡಿ ಅಧಿಕಾರಿಗಳು ಇಬ್ಬರು ಪ್ರಾಂಶುಪಾಲರನ್ನು ಬಂಧನ ಮಾಡಿದ್ದಾರೆ.

ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಚಂದ್ರಕಾಂತ, ಅಫಜಲಪುರಿನ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಸವರಾಜ ಪೂಜಾರಿ ಎಂಬುವವರನ್ನು ಪರೀಕ್ಷಾ ಅಕ್ರಮಕ್ಕೆ ನೇರವಾದ ಹಿನ್ನೆಲೆಯಲ್ಲಿ ಸಿಐಡಿ ಪೋಲಿಸರು ಬಂಧನ ಮಾಡಿದ್ದಾರೆ.

ಇವರಿಬ್ಬರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದರು ಎನ್ನಲಾಗುತ್ತಿದ್ದು,ಅದೇ ವಿಷಯದಲ್ಲಿ ಇದೀಗ ಸಿಐಡಿ ಬಲೆಗೆ ಬಿದ್ದಿದ್ದಾರೆ. ಕೆಲ ದಿನಗಳ ಹಿಂದೆ ಇದೇ ಇಬ್ಬರು ಪ್ರಾಂಶುಪಾಲರನ್ನು ಸಿಐಡಿ ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆಸಿದ್ದರು.ಇದೀಗ ಅವರನ್ನು ಬಂಧಿಸಿ ನ್ಯಾಯಾಧೀಶರ ಎದುರು ಹಾಜರು ಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!