ಕೇದಾರನಾಥದ ಬಿಜೆಪಿ ಶಾಸಕಿ ಶೈಲಾ ರಾಣಿ ರಾವತ್ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೇದಾರನಾಥದ ಬಿಜೆಪಿ ಶಾಸಕಿ ಶೈಲಾ ರಾಣಿ ರಾವತ್ (68) ಮಂಗಳವಾರ ತಡರಾತ್ರಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಡೆಹ್ರಾಡೂನ್‌ನ ಮ್ಯಾಕ್ಸ್‌ ಆಸ್ಪತ್ರೆಯಲ್ಲಿ  ಅವರು ನಿಧನರಾಗಿರುವುದಾಗಿ ಕುಟುಂಬದ ಮೂಲಗಳು ದೃಢಪಡಿಸಿವೆ. ಬೆನ್ನುಮೂಳೆ ಗಾಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ರಾವತ್‌ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

ಶೈಲಾ ರಾಣಿ ರಾವತ್ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!