ಮಂಗಳ ವಾದ್ಯಗಳೊಂದಿಗೆ ಬೆಳ್ಳಂಬೆಳಗ್ಗೆ ಭಕ್ತರಿಗೆ ದರುಶನ ಕೊಟ್ಟ ಕೇದಾರನಾಥ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇದಾರನಾಥ ಪ್ರಸಿದ್ಧವಾದ ಚಾರ್‌ಧಾಮ್ ದೇವಾಲಯಗಳಲ್ಲಿ ಒಂದು. ಉತ್ತರಾಖಂಡದ ಗರ್ವಾಲ್ ಪ್ರದೇಶದಲ್ಲಿರುವ ಈ ದೇವಾಲಯದ ಬಾಗಿಲು ಮಂಗಳವಾರ ಬೆಳಗ್ಗೆ ತೆರೆಯಲಾಗಿದೆ. ಬೆಳಗ್ಗೆ 6.20ಕ್ಕೆ ಮಂಗಳ ವಾದ್ಯಗಳೊಂದಿಗೆ ದೇವಾಲಯದ ಬಾಗಿಲು ತೆರೆಯಲಾಯಿತು. ಈ ಸಂದರ್ಭದಲ್ಲಿ ಸಹಸ್ರಾರು ಸಂಖ್ಯೆಯ ಭಕ್ತರು ಹರಹರ ಮಹಾದೇವ್ ಎಂಬ ಘೋಷಣೆಗಳೊಂದಿಗೆ ದೇವಸ್ಥಾನದ ಆವರಣ ಕಳೆಗಟ್ಟಿತ್ತು. ಈ ಸುಸಂದರ್ಭದಲ್ಲಿ ಆವರಣವನ್ನು 35 ಕ್ವಿಂಟಾಲ್ ಹೂಗಳಿಂದ ಅಲಂಕರಿಸಲಾಗಿದೆ. ಜಗದ್ಗುರು ರಾವಲ್ ಭೀಮ್ ಶಂಕರಲಿಂಗ ಶಿವಾಚಾರ್ಯರು ಬಾಘಿಲು ತೆರೆದರು.

ಈ ಪ್ರದೇಶದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ದೇವಸ್ಥಾನಕ್ಕೆ ತೆರಳುವ ಸಾವಿರಾರು ಯಾತ್ರಾರ್ಥಿಗಳ ಸಂಚಾರವನ್ನು ನಿಲ್ಲಿಸಲಾಗಿದೆ. ಕೇದಾರನಾಥಕ್ಕೆ ಹೋಗುವ ಮಾರ್ಗದಲ್ಲಿ ಭಾರೀ ಹಿಮಪಾತ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಉತ್ತರಾಖಂಡ ಸರ್ಕಾರವು ಯಾತ್ರಿಕರಿಂದ ನೋಂದಣಿ ಅರ್ಜಿಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದೆ. ನಿಲ್ಲಿಸಿದ ನೋಂದಣಿ ಪ್ರಕ್ರಿಯೆಯನ್ನು ಏಪ್ರಿಲ್ 30 ರವರೆಗೆ ಸ್ಥಗಿತಗೊಳಿಸಲಾಗಿದೆ. ಆ ನಂತರ ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ದೇವಾಲಯಕ್ಕೆ ಆಗಮಿಸಿದ ಭಕ್ತರು ಕೇದಾರನಾಥ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಚಾರ್‌ಧಾಮ್ ಯಾತ್ರೆಗೆ ಬರುವ ಯಾತ್ರಾರ್ಥಿಗಳು ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ವಿಶೇಷವಾಗಿ ಕೇದಾರನಾಥ ಧಾಮದಲ್ಲಿ ಮಳೆ ಮತ್ತು ಹಿಮದ ಕಾರಣ ಯಾತ್ರಿಕರು ಮುನ್ನೆಚ್ಚರಿಕೆ ವಹಿಸಬೇಕು. ಚಾರ್ಧಾಮ್ ಯಾತ್ರೆಯು ಉತ್ತರಾಖಂಡ ರಾಜ್ಯದ ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದರಿನಾಥದ ನಾಲ್ಕು ಪವಿತ್ರ ಸ್ಥಳಗಳನ್ನು ಸಂಪರ್ಕಿಸುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!