ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಕೊರೋನಾ ಭೀತಿಯಿಂದ ಆರು ತಿಂಗಳಿಂದ ಮುಚ್ಚಲಾಗಿದ್ದ ಕೇದಾರನಾಥ್ ದೇವಾಲಯ ಇಂದು ತೆರೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮೊದಲ ಪೂಜೆ ನೆರವೇರಿಸಲಾಗಿದೆ.
ಬೆಳಗ್ಗೆ ಐದು ಗಂಟೆಗೆ ದೇವಾಲಯ ತೆರೆದಿದ್ದು, ವೈದಿಕ ಸ್ತ್ರೋತ್ರಗಳು, ಧಾರ್ಮಿಕ ಪೂಜೆ ಪುನಸ್ಕಾರ ನಡೆದಿದೆ.
ಗುಜರಾತ್ನ ಕೈಗಾರಿಕೋದ್ಯಮಿ ದೀಪಕ್ ರಾವತ್ ಅವರು ವಿಶೇಷ ಸಂದರ್ಭಗಳಲ್ಲಿ ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ಪ್ರತಿ ವರ್ಷವೂ ಪೂಜೆ ಸಲ್ಲಿಸುತ್ತಾರೆ. 11 ಕ್ವಿಂಟಾಲ್ ಹೂವುಗಳಿಂದ ದೇವಾಲಯವನ್ನು ಅಲಂಕರಿಸಲಾಗಿದೆ.