6 ತಿಂಗಳ ಬಳಿಕ ಕೇದಾರನಾಥನ ದರ್ಶನ: ಶಿವನ ಸ್ಮರಣೆಯಲ್ಲಿ ಮಿಂದೆದ್ದ ಭಕ್ತಸಮೂಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶುಭ ಶುಕ್ರವಾರದಂದು(ಮೇ,6) ಕೇದಾರನಾಥ ದೇವಾಲಯದ ಬಾಗಿಲು ತೆರೆಯಲಾಗಿದೆ. ದೇವಸ್ಥಾನದ ಬಾಗಿಲು ತೆರೆಯುತ್ತಿದ್ದಂತೆ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಪತ್ನಿ ಗೀತಾ ಧಾಮಿ ಪುಣ್ಯ ಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಸಾವಿರಾರು ಭಕ್ತ ಸಮೂಹದೊಂದಿಗೆ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ಧಾಮದ ಬಾಗಿಲು ತೆರೆಯಲಾಯಿತು. ದೇವಾಲಯವನ್ನು 15 ಕ್ವಿಂಟಾಲ್ ಬಣ್ಣ ಬಣ್ಣ ಹೂವುಗಳಿಂದ ಅಲಂಕರಿಸಲಾಗಿದೆ. ಕಳೆದ ವರ್ಷ ನವೆಂಬರ್ 6 ರಿಂದ, ಆರು ತಿಂಗಳ ಕಾಲ ದೇವಾಲಯದ ದ್ವಾರಗಳು ಮುಚ್ಚಲ್ಪಟ್ಟವು.

ಮಂದಾಕಿನಿ ನದಿಯ ದಂಡೆಯ ಮೇಲಿರುವ ಕೇದಾರನಾಥ, ಯಮುನೋತ್ರಿ, ಗಂಗೋತ್ರಿ ಮತ್ತು ಬದರಿನಾಥಗಳನ್ನು ಒಳಗೊಂಡಿರುವ ನಾಲ್ಕು ಪುರಾತನ ಯಾತ್ರಾ ಸ್ಥಳಗಳಿಗೆ ‘ಚಾರ್ ಧಾಮ್’ ಎಂದು ಕರೆಯಲ್ಪಡುತ್ತದೆ. ಎಂಟನೇ ಶತಮಾನದಲ್ಲಿ ಜಗದ್ ಗುರು ಆದಿ ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟ ಕೇದಾರನಾಥ ದೇವಾಲಯವು ಶಿವನಿಗೆ ಸಮರ್ಪಿತವಾಗಿದೆ.

ಉತ್ತರಕಾಶಿ ಜಿಲ್ಲೆಯ ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳ ಪೋರ್ಟಲ್‌ಗಳನ್ನು ತೆರೆಯುವುದರೊಂದಿಗೆ ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ಮೇ 3 ರಂದು ವಾರ್ಷಿಕ ಚಾರ್ಧಾಮ್ ಯಾತ್ರೆ ಪ್ರಾರಂಭವಾಯಿತು.

ಈ ತಿಂಗಳ ಆರಂಭದಲ್ಲಿ, ರಾಜ್ಯ ಸರ್ಕಾರವು ಚಾರ್ ಧಾಮ್‌ಗಳಿಗೆ ಭೇಟಿ ನೀಡುವ ಯಾತ್ರಾರ್ಥಿಗಳ ಸಂಖ್ಯೆಯನ್ನು ಮಿತಿಗೊಳಿಸಿದೆ. ಪ್ರತಿದಿನ ಒಟ್ಟು 15,000 ಯಾತ್ರಾರ್ಥಿಗಳಿಗೆ ಬದರಿನಾಥ, 12,000 ಕೇದಾರನಾಥ, 7,000 ಗಂಗೋತ್ರಿ ಮತ್ತು 4,000 ಯಮುನೋತ್ರಿಯಲ್ಲಿ ಯಾತ್ರಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. 45 ದಿನಗಳ ಕಾಲ ಈ ವ್ಯವಸ್ಥೆ ಮಾಡಲಾಗಿದೆ.
ಈ ವರ್ಷ, ಯಾತ್ರಾರ್ಥಿಳಿಗೆ COVID-19 ನೆಗಟಿವ್ ಪರೀಕ್ಷಾ ವರದಿ ಅಥವಾ ವ್ಯಾಕ್ಸಿನೇಷನ್ ಪ್ರಮಾಣಪತ್ರ ಕಡ್ಡಾಯವಲ್ಲ ಎಂದು ಘೋಷಿಸಿದೆ. ಪ್ರಸಿದ್ಧ ಪುಣ್ಯ ಕ್ಷೇತ್ರಗಳಿಗೆ ದೇಶ ವಿದೇಶಗಳಿಂದ ಪ್ರತಿ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!