ಭಾರೀ ಹಿಮಪಾತದಿಂದ ಕೇದಾರನಾಥ ಯಾತ್ರೆ ಸ್ಥಗಿತ: ಆರೆಂಜ್ ಅಲರ್ಟ್​ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಳೆದ ಎರಡು ದಿನಗಳಿಂದ ಕೇದಾರನಾಥದಲ್ಲಿ ನಿರಂತರ ಹಿಮಪಾತವಾಗುತ್ತಿರುವ ಹಿನ್ನೆಲೆಯಲ್ಲಿ ಮೇ 3ರಂದು ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಹಿಮಪಾತದಿಂದ ಕೇದಾರನಾಥದಲ್ಲಿ ಚಳಿ ಹೆಚ್ಚಾಗಿದೆ, ಇದರಿಂದಾಗಿ ಅಲ್ಲಿಗೆ ಯಾತ್ರೆಗೆ ತೆರಳುವವರಿಗೂ ಅಡ್ಡಿಯುಂಟಾಗುತ್ತಿದೆ. ಯಾತ್ರೆಗೆ ಆಗಮಿಸಿರುವವರಿಗೆ ಇದೀಗ ಸುರಕ್ಷಿತ ಸ್ಥಳಗಳಲ್ಲಿ ಉಳಿದುಕೊಳ್ಳುವಂತೆ ಸಲಹೆ ನೀಡಲಾಗುತ್ತದೆ. ಕೇದಾರನಾಥ ಯಾತ್ರಿಕರ ನೋಂದಣಿಯನ್ನು ಸ್ಥಗಿತಗೊಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮೊದಲು ಏಪ್ರಿಲ್ 30ರವರೆಗೆ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು.

ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನೋಂದಣಿ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ರುದ್ರಪ್ರಯಾಗ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮಯೂರ್ ದೀಕ್ಷಿತ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!