ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯರು ಬ್ಯಾಗ್ನಲ್ಲಿ ತ್ರಿಶೂಲ ಇಟ್ಟುಕೊಳ್ಳಿ. ಅತ್ಯಾಚಾರಿಗಳು, ಕೊಲೆಗಡುಕರು, ಲವ್ ಜಿಹಾದ್ ಮಾಡುವವರಿಗೆ ತ್ರಿಶೂಲದಿಂದ ಚುಚ್ಚಿ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ನೇಹಾ ಹಿರೇಮಠ ಹತ್ಯೆಯಾಗಿ ಏ.18 ಕ್ಕೆ ಒಂದು ವರ್ಷ ಆಗುತ್ತೆ. ಅಂದು ಶ್ರೀರಾಮಸೇನೆ ಒಂದು ಸಾವಿರ ಮಹಿಳೆಯರಿಗೆ ತ್ರಿಶೂಲ ದೀಕ್ಷೆ ನೀಡಲಿದೆ. ಮಹಿಳೆಯರು ತಮ್ಮ ಬ್ಯಾಗ್ನಲ್ಲಿ ಈ ತ್ರಿಶೂಲ ಇಟ್ಟುಕೊಳ್ಳಲಿ. ಇಂತಹವರು ಯಾರಾದ್ರು ಬಂದ್ರೆ ಚುಚ್ಚಿ. ಅತ್ಯಾಚಾರಿಗಳು, ಕೊಲೆಗಡುಕರು, ಲವ್ ಜಿಹಾದ್ ಮಾಡುವವರಿಗೆ ಚುಚ್ಚಿ. ಕಾಂಗ್ರೆಸ್ ಮಹಿಳೆಯರ ರಕ್ಷಣೆ ಮಾಡಲ್ಲ. ಕಾಂಗ್ರೆಸ್ ಇರೋದು ಮುಸ್ಲಿಮರ ರಕ್ಷಣೆಗಾಗಿ, ಅವರ ವೋಟ್ಗಾಗಿ ಜೊಲ್ಲು ಸುರಿಸುತ್ತಾರೆ ಎಂದು ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.