ಶಾಂತಿ ಕಾಪಾಡಿ, ಹಂತಕರ ಮೇಲೆ ಶೀಘ್ರವೇ ಕ್ರಮವಾಗಲಿದೆ: ದ.ಕ. ಜಿಲ್ಲಾಧಿಕಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟರ್ ಹತ್ಯೆ ಹಿನ್ನೆಲೆಯಲ್ಲಿ ನಾಗರಿಕರು ಯಾವುದೇ ಕಾರಣಕ್ಕೂ ಅಹಿತಕರ ಘಟನೆಗೆ ಮುಂದಾಗದೆ ಶಾಂತಿ ಕಾಪಾಡುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ‌ ಮನವಿ ಮಾಡಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪುತ್ತೂರಿನ ಆಸ್ಪತ್ರೆಗೆ ಧಾವಿಸಿದ್ದ ಅವರು, ಮೃತ ಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಲು ಹಾಗೂ ಪರಿಹಾರ ಒದಗಿಸಲು ಸರ್ಕಾರದ ಗಮನಕ್ಕೆ ತರುವ ಭರವಸೆ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿ ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸಲಿದೆ. ಈ ಬಗ್ಗೆ ನಿರ್ದೇಶನ ನೀಡಲಾಗಿದೆ. ಪೊಲೀಸ್ ವರದಿ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಇದೇ ಸಂದರ್ಭ ಭರವಸೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!